ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಇನ್ನೊಬ್ಬರ ಅತಿಯಾದ ಕಾಳಜಿಯೂ ಕಿರಿ ಕಿರಿ ಉಂಟುಮಾಡಬಹುದು. ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರು ಕೊಡುವ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ಆರೋಗ್ಯದಲ್ಲಿ ಸುಧಾರಣೆ.ವೃಷಭ: ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ಗುರುಹಿರಿಯರ ಆಶೀರ್ವಾದದೊಂದಿಗೆ ಹೊಸ ಕೆಲಸಗಳಿಗೆ ಕೈಹಾಕಲಿದ್ದೀರಿ. ಇಷ್ಟಮಿತ್ರರೊಂದಿಗೆ ಭೋಜನ ಮಾಡುವ ಯೋಗ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ಕಾರ್ಯರಂಗದಲ್ಲಿ ಹಿತಶತ್ರುಗಳಿಂದ ತೊಂದರೆಗಳು ಎದುರಾದೀತು. ಅನಿವಾರ್ಯ ಕಾರಣಗಳಿಗೆ ಅನ್ಯ ಊರಿಗೆ