ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಯಾವುದೇ ವಿಚಾರವಾದರೂ ಸುಲಭವಾಗಿ ಒಪ್ಪಿಕೊಳ್ಳುವ ಪ್ರವೃತ್ತಿ ನಿಮ್ಮದಲ್ಲ. ಹೀಗಾಗಿ ಬೇರೆಯವರಿಗೆ ಇದರಿಂದ ಅಸಮಾಧಾನಗಳುಂಟಾಗಬಹುದು. ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ತಾಳ್ಮೆ ಅಗತ್ಯ.ವೃಷಭ: ಸಂಗಾತಿಯ ಕೆಲವೊಂದು ಮಾತುಗಳು ನಿಮಗೆ ಅಪಥ್ಯವೆನಿಸೀತು. ಆದರೆ ಭವಿಷ್ಯದ ದೃಷ್ಟಿಯಿಂದ ಹೊಂದಾಣಿಕೆ ಅಗತ್ಯ. ಉದ್ಯೋಗದಲ್ಲಿ ಬದಲಾವಣೆಯಾಗುವ ಸಂಭವ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಮನೆಯಲ್ಲಿ ಕೆಲವೊಂದು ಮಹತ್ವದ ಬದಲಾವಣೆಯಾಗಲಿದೆ. ಸಾಂಸಾರಿಕವಾಗಿ ತಾಳ್ಮೆ, ಹೊಂದಾಣಿಕೆಯಿರಲಿ. ವೃತ್ತಿರಂಗದಲ್ಲಿ