ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರುವುದು. ಮನಸ್ಸಿಗೆ ಉಲ್ಲಾಸಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವ್ಯಾವಹಾರಿಕವಾಗಿ ಅಡೆತಡೆಗಳು ನಿವಾರಣೆಯಾಗಲಿವೆ. ಚಿಂತ ಬೇಡ.ವೃಷಭ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನೆರೆಹೊರೆಯವರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ವಾಹನ ಖರೀದಿಗೆ ಯೋಗ ಕೂಡಿಬರುವುದು.ಮಿಥುನ: ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದ್ದು, ಮಾನಸಿಕವಾಗಿ ನೆಮ್ಮದಿಯಿರಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ