ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸದಾಗಿ ಆರಂಭಿಸಿದ್ದ ಉದ್ಯಮದಲ್ಲಿ ಏರುಪೇರುಗಳಾದೀತು. ಆತ್ಮವಿಶ್ವಾಸದಿಂದ ಮುಂದುವರಿಯುವುದು ಮುಖ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರೀಕ್ಷೆಗಳು ಎದುರಾಗಲಿವೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಹೊಸದಾಗಿ ಹೂಡಿಕೆ ಮಾಡುವ ವಿಚಾರವಾಗಿ ಮನೆಯಲ್ಲಿ ಚರ್ಚೆಗಳಾದೀತು. ಮಾತಿನ ಮೇಲೆ ನಿಗಾ ಇರಲಿ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಾಗಿವೆ. ಹಿರಿಯರಿಗೆ