ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆ ಕಂಡುಬರಲಿದೆ. ಮನೆಗೆ ಪ್ರೀತಿ ಪಾತ್ರರ ಆಗಮನವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಅಡಚಣೆಗಳು ಕಂಡುಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ತಾಳ್ಮೆಯಿರಲಿ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಪ್ರಾಮಾಣಿಕತೆಗೆ ತಕ್ಕ ಫಲ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವೈಯಕ್ತಿಕ