ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾವಹಾರಿಕವಾಗಿ ನಿಮ್ಮ ಚಿಂತನೆಗಳು ಇತರರಿಗೆ ಇಷ್ಟವಾಗದೇ ಹೋಗಬಹುದು. ಆದರೆ ಭವಿಷ್ಯದ ದೃಷ್ಟಿಯಿಂದ ಲಾಭದಾಯಕವೆನಿಸಲದೆ. ಮಕ್ಕಳ ಮನಸ್ಸಿಗೆ ಇಷ್ಟವಾಗುವ ರೀತಿಯಲ್ಲಿ ನಡೆದುಕೊಳ್ಳಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ನಿರೀಕ್ಷಿಸಬಹುದು. ವ್ಯಾವಹಾರಿಕವಾಗಿ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ