ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ. ಹಾಗಿದ್ದರೂ ಮಾನಸಿಕವಾಗಿ ಕೆಲವೊಂದು ಋಣಾತ್ಮಕ ಚಿಂತನೆಗಳು ನಿಮ್ಮನ್ನು ಕುಗ್ಗಿಸೀತು. ಆಪ್ತರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ದೇವರ ಪ್ರಾರ್ಥನೆ ಮಾಡಿ.ವೃಷಭ: ಒಳ್ಳೆಯ ಕೆಲಸಕ್ಕೆ ಮೊದಲು ಹಲವು ಅಡೆತಡೆಗಳು ತೋರಿಬಂದೀತು. ಅದೆಲ್ಲವನ್ನೂ ಮೀರಿ ನಡೆಯಬೇಕಾದ ಅನಿವಾರ್ಯತೆಯಿದೆ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ.ಮಿಥುನ: ಉದ್ಯೋಗ ಬದಲಾವಣೆಗೆ ಪ್ರಯತ್ನಿಸಲಿದ್ದು, ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಲಿದೆ.