ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ನಿಮ್ಮ ಸದಾಶಯಗಳು ನೆರವೇರಲಿದೆ. ಆರ್ಥಿಕವಾಗಿ ಹಣಕಾಸಿನ ಯೋಜನೆಗಳನ್ನು ಸರಿಯಾಗಿ ನಿಭಾಯಿಸಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವ್ಯಾಪಾರಿಗಳಿಗೆ ಮುನ್ನಡೆ ಕಂಡುಬರಲಿದೆ.ವೃಷಭ: ಸಾಂಸಾರಿಕವಾಗಿ ನಿಮ್ಮ ಕಷ್ಟಗಳಿಗೆ ಆತ್ಮೀಯರ ಸಹಾಯ ಸಿಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನಿಸಲಿದ್ದೀರಿ. ವೈಯಕ್ತಿಕ ಜೀವನದಲ್ಲಿ ಏಳಿಗೆ ಕಂಡುಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಕಾರ್ಯಕ್ಷೇತ್ರದಲ್ಲಿ ನಿಮಗೆ ಅಡೆತಡೆಯಾಗಿದ್ದ ವಿಚಾರಗಳು ನಿವಾರಣೆಯಾಗಲಿವೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.