ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸರಕಾರೀ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಟ್ಟಡ ಕಾಮಗಾರಿ ಕೆಲಸಗಳನ್ನು ಕೆಲವು ದಿನ ಮುಂದೂಡುವುದು ಉತ್ತಮ. ದುಂದು ವೆಚ್ಚ ಬೇಡ.ಮಿಥುನ: ವೃತ್ತಿರಂಗದಲ್ಲಿ ನಿಮಗೆ ಪ್ರತಿಸ್ಪರ್ಧೆಗಳು ಎದುರಾದೀತು. ತಾಳ್ಮೆ, ಸಂಯಮದಿಂದ ವ್ಯವಹರಿಸಿ.