ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ವಿಚಾರಧಾರೆಗಳಿಗೆ ಸೂಕ್ತ ಬೆಲೆ ಸಿಗದೇ ಬೇಸರವಾದೀತು. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ಪೂರ್ತಿ ಮಾಡಲಿದ್ದೀರಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಹಿರಿಯರ ಮಾತಿಗೆ ಮನ್ನಣೆ ಕೊಡಬೇಕಾಗುತ್ತದೆ.ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆಯ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯುಂಟಾದೀತು.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ. ಕ್ರಿಯಾತ್ಮಕ ಯೋಚನೆ