ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರಿಗಳ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹಿರಿಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಸಿಗಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ಚಿಂತೆ ಬೇಡ.ವೃಷಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸಾಮಾಜಿಕ ಕೆಲಸಗಳಲ್ಲಿ ಭಾಗಿಯಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.ಮಿಥುನ: ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಹಣಕಾಸಿನ