ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ವೈಯಕ್ತಿಕ ದೇಹಾರೋಗ್ಯದ ಕಡೆಗೆ ಗಮನವಿರಲಿ. ಸಂಗಾತಿಯ ಕೆಲವೊಂದು ಸಲಹೆಗಳನ್ನು ಪಾಲಿಸುವುದು ಉತ್ತಮ. ದಿನದಂತ್ಯಕ್ಕೆ ಶುಭ ಸುದ್ದಿ ಆಲಿಸುವಿರಿ.ವೃಷಭ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಮೇಲಧಿಕಾರಿಗಳ ಪ್ರಶಂಸೆ ಸಿಗಲಿದೆ. ಮಹಿಳೆಯರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ತಾಳ್ಮೆಯಿರಲಿ.ಮಿಥುನ: ವೃತ್ತಿರಂಗದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ.