ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಲೇವಾದೇವಿ ವ್ಯವಹಾರ ಮಾಡುವವರಿಗೆ ನಷ್ಟದ ಭೀತಿ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸುವಿರಿ. ಸಂಗಾತಿಗೆ ನಿಮ್ಮ ಮನಸ್ಸಿನ ಮಾತನ್ನು ಹೇಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.ವೃಷಭ: ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಸಹೋದರಾದಿ ಸಂಬಂಧಿಗಳೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ತಾಳ್ಮೆಯಿರಲಿ.ಮಿಥುನ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದ್ದು, ನೆಮ್ಮದಿ ಕಾಣಲಿದ್ದೀರಿ.