ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸ್ವತಂತ್ರವಾಗಿ ಕೆಲಸ ಮಾಡುವ ನಿಮ್ಮ ಯೋಜನೆಗೆ ಯಶಸ್ಸು ಸಿಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೈಯಿಂದ ಅನಿರೀಕ್ಷಿತವಾಗಿ ಅಚಾತುರ್ಯಗಳಾಗುವ ಸಾಧ್ಯತೆ. ತಾಳ್ಮೆಯಿಂದ ವ್ಯವಹರಿಸಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಸಹೋದಾರಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ.