ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಧನಾದಾಯವಿದ್ದರೂ ಅಷ್ಟೇ ಖರ್ಚೂ ಇರಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಸಾಂಸಾರಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಅನಗತ್ಯ ಚಿಂತೆ ಬೇಡ.ವೃಷಭ: ಮಕ್ಕಳಿಗೆ ಕೆಲವೊಂದು ವಸ್ತು ಕೊಡಿಸುವ ಸಲುವಾಗಿ ಖರ್ಚು ವೆಚ್ಚಗಳಾದೀತು. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೆಕಾಗಿಲ್ಲ. ತಾಳ್ಮೆಯಿರಲಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಬಡ್ತಿ ಸಂಭವ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ.