ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಧನಾರ್ಜನೆಯಿದ್ದರೂ ಅದಕ್ಕೆ ಸರಿಸಮನಾದ ಖರ್ಚು ವೆಚ್ಚವಿರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ. ತಾಳ್ಮೆಯಿರಲಿ.ವೃಷಭ: ಮಾನಸಿಕವಾಗಿ ನೆಮ್ಮದಿಯಿರಲಿದ್ದು, ಆಪ್ತರೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಇಷ್ಟ ಭೋಜನ ಮಾಡಲಿದ್ದೀರಿ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಪೂರ್ವ ಯೋಜಿತ ಕೆಲಸಗಳಿಗಾಗಿ ಪರವೂರಿಗೆ ಪ್ರಯಾಣ ಮಾಡಬೇಕಾಗುತ್ತದೆ. ನೀವು ಅಂದುಕೊಂಡಂತೇ ಕೆಲಸ ಕಾರ್ಯಗಳು ನಡೆಯುತ್ತಿವೆ