ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳ ವಿದ್ಯಾಭ್ಯಾಸದ ಕಡೆಗೆ ವಿಶೇಷ ಗಮನ ಕೊಡಬೇಕಾಗುತ್ತದೆ. ವಾರಂತ್ಯದಲ್ಲಿ ಕಿರು ಪ್ರವಾಸಕ್ಕೆ ಯೋಜನೆ ಹಾಕಿಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ಸತ್ಕಾರ್ಯದಲ್ಲಿ ಆಸಕ್ತಿ ಮೂಡಲಿದೆ.ವೃಷಭ: ಶೈಕ್ಷಣಿಕ ರಂಗದಲ್ಲಿರುವವರಿಗೆ ಸಾಧನೆ ಮಾಡುವ ಅವಕಾಶ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆತುರದ ನಿರ್ಧಾರದಿಂದ ತೊಂದರೆ ಮೈಮೇಲೆಳದುಕೊಳ್ಳಬೇಡಿ. ತಾಳ್ಮೆಯಿರಲಿ.ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.