ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂತಸದಿಂದ ಕಾಲ ಕಳೆಯುವ ಅವಕಾಶ ಸಿಕ್ಕರೂ ನಿಮ್ಮ ಸ್ವಯಂಕೃತ ಅಪರಾಧದಿಂದ ಕಳೆದುಕೊಳ್ಳಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ ನಿಮಗೆ ಸಿಗಲಿದೆ. ಗುರು ಹಿರಿಯರ ಆಶೀರ್ವಾದ ನಿಮ್ಮ ಮೇಲಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ನಿರುದ್ಯೋಗಿಳಿಗೆ ಉತ್ತಮ ಅವಕಾಶಗಳು ಸಿಗಲಿದೆ.