ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಕೈ ಹಿಡಿದ ಕೆಲಸಗಳು ಸುಸ್ರೂತ್ರವಾಗಿ ನೆರವೇರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವ ಸಾಧ್ಯತೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಶುಭ ದಿನ.ವೃಷಭ: ನಿಮ್ಮ ಬದುಕಿನಲ್ಲಿ ಹಣಕಾಸಿನ ವಿಚಾರವಾಗಿ ಇದುವರೆಗೆ ಇದ್ದ ಸಂಘರ್ಷಗಳು ದೂರವಾಗುವ ದಿನ. ದೈವಾನುಕೂಲದಿಂದ ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.ಮಿಥುನ: ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು