ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆಪ್ತರ ದೇಹಾರೋಗ್ಯದ ಬಗ್ಗೆ ಚಿಂತೆಯಾದೀತು. ನೆರೆಹೊರೆಯವರ ಸಹಾಯಕ್ಕೆ ಧಾವಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿಯಾದೀತು. ತಾಳ್ಮೆಯಿಲ್ಲದೇ ಕೆಲಸವಾಗದು.ವೃಷಭ: ಹಿಂದೆ ಒಬ್ಬರಿಂದ ಪಡೆದ ಸಹಾಯಕ್ಕೆ ಪ್ರತ್ಯುಪಕಾರ ಮಾಡುವ ಅವಕಾಶ ಒದಗಿಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಗುರುಹಿರಿಯರಿಂದ ಸಲಹೆ ಸೂಚನೆಗಳು ಸಿಗಲಿವೆ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವ