ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಜೊತೆಗೂ ಕೀರ್ತಿಯೂ ಸಂಪಾದಿಸಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಾಂಸಾರಿಕವಾಗಿ ನಿಮ್ಮ ಅಧಿಕಾರಯುತ ಧೋರಣೆ ಇತರರಿಗೆ ಇಷ್ಟವಾಗದು.ವೃಷಭ: ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸಿಗೆ ನೆಮ್ಮದಿ ಪಡೆಯಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು.ಮಿಥುನ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಕಷ್ಟವಾದೀತು.