ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂತೋಷದಿಂದ ಕಳೆಯುವುದು ನಿಮ್ಮ ಕೈಯಲ್ಲೇ ಇದೆ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ತಾಳ್ಮೆಯಿರಲಿ.ವೃಷಭ: ಗೃಹ ಸಂಬಂಧೀ ಕೆಲಸಗಳಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ.ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಬಹುದಿನಗಳ ನಂತರ ಬಂಧು ಮಿತ್ರರನ್ನು ಭೇಟಿಯಾದ ಸಂತೋಷ