ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮಲ್ಲಿರುವ ಒಳ್ಳೆಯತನ ದುರುಪಯೋಗ ಪಡಿಸಿಕೊಳ್ಳುವವರಿರುತ್ತಾರೆ. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳಿಂದ ಮುಕ್ತಿ ಸಿಗಲಿದೆ. ತಾಳ್ಮೆಯಿರಲಿ.ಮಿಥುನ: ಹೊಸದಾಗಿ ಆರಂಭಿಸಿರುವ ಉದ್ದಿಮೆಯಲ್ಲಿ ಮುನ್ನಡೆ ಕಂಡುಬರಲಿದೆ. ಸಂಗಾತಿಯ ಸೂಕ್ತ ಸಲಹೆಗಳು ಉಪಯೋಗಕ್ಕೆ ಬರಲಿವೆ.