ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸದಾ ಕ್ರಿಯಾಶೀಲರಾಗಿರಲಿದ್ದೀರಿ. ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸುವಿರಿ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ.ವೃಷಭ: ದೈಹಿಕ ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ಪರರ ಹಿತಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ಸಾಲಗಾರರಿಂದ ಮುಕ್ತಿ ಸಿಗಲಿದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಚಿಂತೆ ಬೇಡ.ಮಿಥುನ: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು.