ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಹನ, ಭೂಮಿ ಖರೀದಿ ವಿಚಾರದಲ್ಲಿ ಪರಿಚಿತರ ಮಧ್ಯಸ್ಥಿಕೆ ಪಡೆಯುವುದು ಉತ್ತಮ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಾತ್ರಾರ್ಥಿಗಳಿಗೆ ಅಡೆತಡೆಗಳು ಬಂದೀತು. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಕೌಟುಂಬಿಕ ವಿಷಯಕ್ಕೆ ಹಿರಿಯರೊಂದಿಗೆ ಸಂಘರ್ಷಗಳಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಕಡಿಮೆಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಅತ್ಯಂತ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಬೇಕಾದ ದಿನವಿದು. ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲಿದ್ದೀರಿ.