ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಭವಿಷ್ಯಕ್ಕಾಗಿ ಕೆಲವೊಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳು ಬರಬಹುದು.ವೃಷಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗಲಿದೆ. ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.