ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರ ತಪ್ಪುಗಳನ್ನು ಹುಡುಕುತ್ತಾ ಕೂರುವ ಬದಲು ನಿಮ್ಮ ಕೆಲಸಗಳ ಬಗ್ಗೆ ಗಮನ ಹರಿಸುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪಕ್ಕೆ ಅವಕಾಶ ಕೊಡಬೇಡಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ರಾಜಕೀಯ ಕ್ಷೇತ್ರದಲ್ಲಿರುವವಿರಗೆ ತಮ್ಮ ನಿರ್ಧಾರ ಮರು ಪರಿಶೀಲಿಸುವ ಅಗತ್ಯ ಕಂಡುಬರಲಿದೆ. ಆಹಾರೋದ್ಯಮಿಗಳಿಗೆ ಮುನ್ನಡೆಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ವಿದ್ಯಾರ್ಥಿ ವರ್ಗದವರಿಗೆ ಹೊಸ ಅವಕಾಶಗಳನ್ನು ಕಂಡುಕೊಳ್ಳಲಿದ್ದೀರಿ.