ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯಾಸಪಡಬೇಕಾದೀತು. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.ವೃಷಭ: ನಿಮ್ಮ ಕೆಲಸ ಕಾರ್ಯಗಳ ನಿಮಿತ್ತ ಇನ್ನೊಬ್ಬರನ್ನು ಆಶ್ರಯಿಸಬೇಕಾದ ಪರಿಸ್ಥಿತಿಯಿರಲಿದೆ. ನಾಯಕತ್ವ ಗುಣದಿಂದ ಇತರರನ್ನು ನಿಮ್ಮತ್ತ ಸೆಳೆಯಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ.ಮಿಥುನ: ನಿರುದ್ಯೋಗಿಗಳಿಗೆ ಯೋಗ್ಯತೆಗೆ ಅನುಸಾರವಾಗಿ ಉದ್ಯೋಗ ಸಿಗುವುದು. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರುವುದು. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ.