ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾದೀತು. ವಿದ್ಯಾರ್ಥಿಗಳಿಗೆ ಹೊಸ ಸವಾಲುಗಳು ಎದುರಾಗಲಿವೆ. ತಾಳ್ಮೆಯಿರಲಿ.ವೃಷಭ: ಭೂಮ್ಯಾದಿ ವ್ಯವಹಾರಗಳಲ್ಲಿ ಅಪರಿಚಿತರನ್ನು ನಂಬಿ ವಂಚನೆಗೊಳಗಾಗಬೇಡಿ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಅನಗತ್ಯ ಚಿಂತೆ ಬೇಡ.ಮಿಥುನ: ವ್ಯಾವಹಾರಿಕವಾಗಿ ನಿಮಗೆ ಎದುರಾಳಿಯಾಗಿದ್ದವರಿಂದ ತೊಂದರೆಗಳು ಎದುರಾದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಹಿರಿಯರಿಗೆ