ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿಂದಿನ ಆರೋಗ್ಯ ಸಮಸ್ಯೆಗಳು ಮತ್ತೆ ಕಾಣಿಸಿಕೊಂಡು ಚಿಂತೆಗೆ ಕಾರಣವಾದೀತು. ಸಂಗಾತಿಯೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ತಾಳ್ಮೆಯಿರಲಿ.ವೃಷಭ: ವೈಯಕ್ತಿಕ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಮನಸ್ಸಿನ ಮಾತು ಹೇಳಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಸಾಧಿಸಲು ಸದವಕಾಶಗಳು ದೊರೆಯಲಿದೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ