ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಣಿಸಿದಂತೇ ಕಾರ್ಯಗಳು ನೆರವೇರಲಿದೆ. ಆರೋಗ್ಯ ಸಮಸ್ಯೆಗೆ ನಿಮ್ಮದೇ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಇಷ್ಟಾನುಸಾರ ನಿರ್ಧಾರ ಕೈಗೊಳ್ಳಲು ಹೋದರೆ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು.ಮಿಥುನ: ನಿಮ್ಮ ಒಳ್ಳೆಯತನಕ್ಕೆ ತಕ್ಕ ಬೆಲೆ ಸಿಗಲಿದೆ. ಶುಭ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮನಸ್ಸಿನಲ್ಲಿರುವ ಕೆಲಸಗಳನ್ನು