ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಬಹು ದಿನಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ.ವೃಷಭ: ವಿಶೇಷ ವ್ಯಕ್ತಿಗಳು ಇಂದು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ದೂರದ ವ್ಯವಹಾರಗಳಿಂದ ಲಾಭ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆಸ್ತಿ ಖರೀದಿ, ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.