ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿಂದೆ ಮಾಡಿದ ತಪ್ಪುಗಳಿಗೆ ಪ್ರಾಯಶ್ಚಿತ ಮಾಡಿಕೊಳ್ಳಲಿದ್ದೀರಿ. ಗೃಹಿಣಿಯರಿಗೆ ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಬೇಕಾದೀತು. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಪ್ರಗತಿ ಕಂಡು ನೆಮ್ಮದಿಯಾಗಲಿದೆ.ವೃಷಭ: ಮನಸ್ಸಿಗೆ ಇಷ್ಟವಾಗುವ ವ್ಯಕ್ತಿಗಾಗಿ ನೀವು ಹುಡುಕಾಡುತ್ತಿದ್ದರೆ ಇಂದು ಫಲ ಸಿಗಲಿದೆ. ಯಂತ್ರೋಪಕರಣಗಳೊಂದಿಗೆ ಕೆಲಸ ಮಾಡುವಾಗ ಎಚ್ಚರಿಕೆ ವಹಿಸಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ.ಮಿಥುನ: ಭವಿಷ್ಯದ ಯೋಜನೆ ಬಗ್ಗೆ ಮೀನ ಮೇಷ ಎಣಿಸುತ್ತಾ ಕೂರುವುದು ಬೇಕಾಗಿಲ್ಲ.