Widgets Magazine

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು| Krishnaveni K| Last Modified ಭಾನುವಾರ, 16 ಜೂನ್ 2019 (08:56 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

 
ಮೇಷ: ಹಿರಿಯರಿಗೆ ಸಂತಸಕೊಡುವ ಕೆಲಸ ಮಾಡುವಿರಿ. ದೇವಾಲಯಗಳಿಗೆ ಭೇಟಿ ಕೊಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಎಂದಿನ ಕಾರ್ಯದೊತ್ತಡವಿರಲಿದೆ. ಆರ್ಥಿಕವಾಗಿ ಸಮಾಧಾನಕರ ದಿನ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ವೃಷಭ: ನೀವು ತೆಗೆದುಕೊಳ್ಳುವ ಕೆಲವೊಂದು ನಿರ್ಧಾರಗಳು ಬಂಧು ವರ್ಗದವರ ಅಸಮಾಧಾನಕ್ಕೆ ಕಾರಣವಾಗಬಹುದು. ಕೌಟುಂಬಿಕವಾಗಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ.
 
ಮಿಥುನ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕುಲದೇವರ ಹರಕೆ ತೀರಿಸಿದರೆ ಕೈಗೊಂಡ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುವುದು. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಿರದು. ಆದರೆ ಖರ್ಚಿನ ಬಗ್ಗೆ ಹಿಡಿತವಿರಲಿ.
 
ಕರ್ಕಟಕ: ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಶುಭ ಸುದ್ದಿ ಆಲಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆ ಅಗತ್ಯ.
 
ಸಿಂಹ: ಹೊಸ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಆರ್ಥಿಕವಾಗಿ ಸಾಕಷ್ಟು ಲಾಭ ಗಳಿಸುವಿರಿ. ಸಂಗಾತಿಯ ಇಷ್ಟಗಳಿಗೆ ಬೆಲೆ ಕೊಡುವಿರಿ. ಭೂಮಿ, ಮನೆ ಖರೀದಿಗೆ ಸಕಾಲ. ದೈವಾನುಗ್ರಹ ನಿಮ್ಮ ಮೇಲಿರಲಿದೆ.
 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಹಿರಿಯರ ಆರೋಗ್ಯ ಚಿಂತೆ ಹೆಚ್ಚು ಮಾಡುವುದು. ಆದರೆ ಸಂಗಾತಿಯ ಸಹಕಾರ ನಿಮಗೆ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.
 
ತುಲಾ: ಚಿನ್ನಾಭರಣ ಖರೀದಿ ಮಾಡುವಿರಿ. ಆರ್ಥಿಕವಾಗಿ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆದರೆ ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ವಂಚನೆಗೊಳಗಾಗುವ ಭೀತಿಯಿದೆ. ಕಿರು ಸಂಚಾರ ಯೋಗವಿದ್ದು, ಎಚ್ಚರಿಕೆ ಅಗತ್ಯ.
 
ವೃಶ್ಚಿಕ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ವಿದಶ ಪ್ರಯಾಣ ಮಾಡುವ ಸಾಧ್ಯತೆಯಿದೆ. ಮೇಲ್ವರ್ಗದ ಅಧಿಕಾರಿಗಳಿಗೆ ಮುನ್ನಡೆ ಯೋಗವಿದೆ. ಸಂತಾನ ಹೀನ ದಂಪತಿ ಧಾರ್ಮಿಕ ಪರಿಹಾರ ಕಂಡುಕೊಳ್ಳಲು ಮುಂದಾಗುವರು.
 
ಧನು: ಬೇಡದ ಮಾತಿಗೆ ಕಿವಿಗೊಟ್ಟು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮಾಡಬೇಕಾದ ಸಮಯವಿದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ.
 
ಮಕರ: ಉದ್ದೇಶಿಕ ಕಾರ್ಯಗಳಿಗೆ ಕೆಲವೊಂದು ಅಡ್ಡಿ ಆತಂಕಗಳು ಎದುರಾದೀತು. ಮನೆಯಲ್ಲಿ ಅವಿವಾಹಿತ ಸೋದರಿಯರಿದ್ದರೆ ಅವರ ವಿವಾಹಾದಿ ಪ್ರಯತ್ನ ನಡೆಸುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ.
 
ಕುಂಭ: ಬಂಧು ಮಿತ್ರರೊಂದಿಗೆ ಪ್ರವಾಸ, ಮೋಜು ಮಾಡುವ ಸಾಧ್ಯತೆಯಿದೆ. ಆದರೆ ವಾಹನ ಚಲಾಯಿಸುವಾಗ ಎಚ್ಚರ ತಪ್ಪಿದರೆ ಅಪಾಯ ಗ್ಯಾರಂಟಿ. ನಿರುದ್ಯೋಗಿಗಳು ಕುಲದೇವರ ಪ್ರಾರ್ಥನೆ ಮಾಡಿದರೆ ಅಂದುಕೊಂಡಿದ್ದು ನೆರವೇರುವುದು.
 
ಮೀನ: ಸರಕಾರಿ ಕಚೇರಿ, ಕೋರ್ಟು ವ್ಯವಹಾರಗಳಲ್ಲಿ ಜಯ ಸಾಧಿಸುವಿರಿ. ಆದರೆ ದಾಯಾದಿಗಳ ಅಸಮಾಧಾನಕ್ಕೆ ಕಾರಣವಾಗಬೇಕಾದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುವುದು.
ಇದರಲ್ಲಿ ಇನ್ನಷ್ಟು ಓದಿ :