ನವದೆಹಲಿ: ಪ್ರಧಾನಿ ಮೋದಿ ಭಾನುವಾರ ಅಂದರೆ ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷ ಲೈಟ್ ಆಫ್ ಮಾಡಿ ದೀಪ ಬೆಳಗಲು ರಾಷ್ಟ್ರಕ್ಕೆ ಕರೆ ನೀಡಿದ್ದಾರೆ. ಈ ಮೂಲಕ ಕೊರೋನಾ ವಿರುದ್ಧ ಹೋರಾಡಲು ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎಂದು ಸೂಚಿಸೋಣ ಎಂದಿದ್ದಾರೆ.