ಸೇಕ್ರೆಡ್ ಗೇಮ್ಸ್ ನಲ್ಲಿ ರಾಜೀವ್ ಗಾಂಧಿಗೆ ಅವಹೇಳನ ; ನಟ ಸಿದ್ದೀಕಿ, ನಿರ್ಮಾಪಕರ ವಿರುದ್ಧ ದೂರು

ಮುಂಬೈ, ಬುಧವಾರ, 11 ಜುಲೈ 2018 (07:04 IST)

ಮುಂಬೈ : ಪಶ್ಚಿಮಬಂಗಾಳದ ರಾಜೀವ್ ಕುಮಾರ್ ಸಿನ್ಹಾ ಅವರು ಬಾಲಿವುಡ್ ನಟ ನವಾಝುದ್ದೀನ್ ಸಿದ್ದೀಕಿ, ನೆಟ್‌ಫ್ಲಿಕ್ಸ್ ಹಾಗೂ ವೆಬ್ ಸರಣಿಯ ನಿರ್ಮಾಪಕನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.


ವೆಬ್ ಸೀರೀಸ್ ಸೇಕ್ರೆಡ್ ಗೇಮ್ಸ್ ನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ರಾಜೀವ್ ಕುಮಾರ್ ಸಿನ್ಹಾ ಅವರು ನಟ ಹಾಗೂ ನಿರ್ಮಾಪಕನ ವಿರುದ್ಧ ಗಿರೀಶ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.


'ದೂರನ್ನು ಉನ್ನತ ಅಧಿಕಾರಿಗಳಿಗೆ ರವಾನಿಸಲಾಗುವುದು ಹಾಗೂ ಮುಂದಿನ ಮೂರು ದಿನಗಳ ಒಳಗೆ ಪ್ರಥಮ ಮಾಹಿತಿ ವರದಿ ಸಂಖ್ಯೆಯನ್ನು ಕಳುಹಿಸಿಕೊಡಲಾಗುವುದು ಎಂದು ಪೊಲೀಸ್ ಠಾಣೆಯಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ' ಎಂದು ಸಿನ್ಹಾ ಹೇಳಿದ್ದಾರೆ. ಹಾಗೇ ‘ವೆಬ್ ಸರಣಿಯಲ್ಲಿ ಸಿದ್ದೀಖಿ ಅವರು ರಾಜೀವ್ ಗಾಂಧಿ ಅವರನ್ನು ನಿಂದನೀಯ ಪದ ಬಳಸಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಆ ಕಾಲದ ಕೆಲವು ಸತ್ಯಗಳನ್ನು ತಪ್ಪು ವ್ಯಾಖ್ಯಾನಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 
 



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಡಿವೋರ್ಸ್ ಬಗ್ಗೆ ಪವನ್ ಕಲ್ಯಾಣ್ ಮಾಜಿ ಪತ್ನಿ ಹೇಳಿದ ಸ್ಪೋಟಕ ಮಾಹಿತಿ ಏನು?

ಹೈದರಾಬಾದ್ : ಇತ್ತೀಚೆಗೆ ಟಾಲಿವುಡ್ ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರು ...

news

ಸಂಗೀತ ನಿರ್ದೇಶಕ ಸಾಧು ಕೋಕಿಲ ಸಿಸಿಬಿ ಪೊಲೀಸರನ್ನು ಭೇಟಿ ಮಾಡಿದ್ಯಾಕೆ?

ಬೆಂಗಳೂರು : ರೌಡಿ ಶೀಟರ್ ಸೈಕಲ್ ರವಿಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿದ್ದಾರೆಂದು ಮಾಧ್ಯಮಗಳಲ್ಲಿ ...

news

ಚಶ್ಮಾ’ ಶೋ ನಲ್ಲಿ ನಟಿಸಿದ ಖ್ಯಾತ ನಟ ಕವಿ ಕುಮಾರ್ ಅಜಾದ್ ನಿಧನ

ಮುಂಬೈ : ತಾರಕ್ ಮೆಹ್ತಾ ಅವರ ‘ಚಶ್ಮಾ’ ಶೋ ನಲ್ಲಿ ನಟಿಸಿದ ಖ್ಯಾತ ನಟ ಕವಿ ಕುಮಾರ್ ಅಜಾದ್ ಅವರು ...

news

ಶಿಲ್ಪಾ ಗಣೇಶ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಯಾರ ವಿರುದ್ಧ ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಅವರು ತಮ್ಮ ವಿರುದ್ಧ ...

Widgets Magazine
Widgets Magazine