ಸಾಕ್ಷ್ಯಾಧಾರಗಳ ಕೊರತೆ; ಭಟ್, ಆಸಿಫ್‌ಗೆ ನೆರವಾಗುವ ಸಾಧ್ಯತೆ

ಲಾಹೋರ್, ಸೋಮವಾರ, 31 ಅಕ್ಟೋಬರ್ 2011 (15:52 IST)

Match Fixing
PTI
ನಿಖರ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ನಾಯಕ ಸಲ್ಮಾನ್ ಭಟ್ ಮತ್ತು ಮಾಜಿ ವೇಗಿ ಮೊಹಮ್ಮದ್ ಆಸಿಫ್ ಅವರಿಗೆ ನೆರವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಈ ಸಂಬಂಧ ಸಲ್ಮಾನ್ ಭಟ್ ವಕೀಲ ಅಫ್ತಬ್ ಗುಲ್ ಹೇಳಿಕೆ ನೀಡಿದ್ದು, ಲಂಡನ್ ಸೌಥ್‌ವಾರ್ಕ್ ನ್ಯಾಯಲಯದಲ್ಲಿ ಬೇಕಾದಷ್ಟು ಪುರಾವೆಗಳು ದಾಖಲಾಗಿಲ್ಲ. ಈ ಹಿನ್ನಲೆಯಲ್ಲಿ ತಮ್ಮ ಕಕ್ಷಿಗಾರನ ವಿರುದ್ಧ ತೀರ್ಪು ಬರುವ ಸಾಧ್ಯತೆ ಕಡಿಮೆಯಾಗಿದೆ ಎಂಬ ವಕೀಲರ ಹೇಳಿಕೆಯನ್ನು ಡೈಲಿ ಮೇಲ್ ವರದಿ ಮಾಡಿವೆ.

ಆರೋಪಿಗಳು ತಪ್ಪಿತ್ತಸ್ಥರು ಎಂಬುದನ್ನು ಸಾಬೀತುಪಡಿಸುವಷ್ಟು ಪುರಾವೆಗಳು ನ್ಯಾಯಲಕ್ಕೆ ಲಭಿಸಿಲ್ಲ. ಅಲ್ಲದೆ ಪ್ರಕರಣದ ಆರೋಪಿ ಬುಕ್ಕಿ ಮಜರ್ ಮಜೀದ್ ಅವರಿಂದ ಆಟಗಾರರು ಹಣ ಪಡೆದಿದ್ದಾರೆ ಎಂಬ ನ್ಯೂಸ್ ಆಫ್ ದಿ ವಲ್ಡ್ ಆಪಾದನೆಯು ಅನಿರ್ಣಾಯಕವಾಗಿದೆ ಎಂದು ಹೇಳಲಾಗಿದೆ.

ಪ್ರಸ್ತುತ ಭಟ್ ಹಾಗೂ ಆಸಿಫ್ ಮೇಲೆ ವಿಧಿಸಲಾಗಿರುವ ಶಿಕ್ಷೆಯು ನ್ಯಾಯಸಮ್ಮತವಲ್ಲ ಎಂದು ವಾದ ಮಂಡನೆ ಮಾಡಲಾಗಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿದ್ದ ಅಂದಿನ ನಾಯಕ ಸಲ್ಮಾನ್ ಭಟ್ ಹಾಗೂ ವೇಗಿಗಳಾದ ಮೊಹಮ್ಮದ್ ಆಸಿಫ್ ಹಾಗೂ ಮೊಹಮ್ಮದ್ ಅಮೇರ್ ಉದ್ದೇಶಪೂರ್ವಕವಾಗಿಯೇ ನೊ ಬಾಲ್ ಎಸೆದಿದ್ದರು ಎಂಬ ಆರೋಪ ದಾಖಲಾಗಿತ್ತು. ಆದರೆ ತಮ್ಮ ಮೇಲಿನ ಆರೋಪಗಳನ್ನೆಲ್ಲ ಭಟ್ ಹಾಗೂ ಆಸಿಫ್ ನಿರಾಕರಿಸುತ್ತಲೇ ಬಂದಿದ್ದರು.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

ಭಾರತೀಯ ಹಾಕಿ ತಂಡ ಯೂರೋಪ್‌‌ಗೆ ತೆರಳಲು ಸಜ್ಜಾಗಿದೆ

ನವದೆಹಲಿ :ಮುಂದಿ ದಿನಗಳಲ್ಲಿ ನಡೆಯಲಿರುವ ಹಾಕಿ ವಿಶ್ವ ಕಪ್‌‌ಗಾಗಿ ಸಿದ್ದತೆ ನಡೆಸುತ್ತಿರುವ ಇಂಡಿಯನ್‌ ...

ಧೋನಿ ಹೇಳಿಕೆ ಪರಿಶೀಲಿಸಲು ಅವಕಾಶ ಕೋರಿ ಸುಪ್ರೀಂಕೋರ್ಟ್‌ಗೆ ಬಿಸಿಸಿಐ ಅರ್ಜಿ

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಹಗರಣದ ತನಿಖೆ ನಡೆಸುತ್ತಿರುವ ಮುದ್ಗಲ್ ಸಮಿತಿಯ ಮುಂದೆ ...

ಟೆನಿಸ್‌‌‌ ಶ್ರೇಯಾಂಕ: ಭಾರತೀಯರ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ : ಭಾರತದ ಡೆವಿಸ್‌‌‌‌ಕಪ್‌ನಲ್ಲಿ ಸೋಮದೇವ್ ದೇವವರ್ಮನ್ ಕೊರಿಯಾ ವಿರುದ್ದ ಗೆಲುವನ್ನು ಸಾಧಿಸುವುದರ ...

ಯುವಿಯನ್ನು ಸಮರ್ಥಿಸಿಕೊಂಡು ಸಚಿನ್ ಬ್ಯಾಟಿಂಗ್

ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರನ್ನು ಸಮರ್ಥಿಸಿಕೊಂಡು ಸಚಿನ್ ತೆಂಡೂಲ್ಕರ್ ...

Widgets Magazine
Widgets Magazine