ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞರೊಂದಿಗೆ ನಡೆಸಿದ ಚರ್ಚೆಯ ವೇಳೆ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಮಾಡುವ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸ್ವ ಇಚ್ಛೆಯಿಂದ ಯಾರೇ ಮುಂದೆ ಬಂದು ಜಾರಿ ಮಾಡಿದರೂ ಸರಕಾರ ಅವಕಾಶ ನೀಡಲಿದೆ ಎಂದರು. ಶಿಕ್ಷಣ ನೀತಿಯನ್ನು ಆಮೂಲಾಗ್ರವಾಗಿ ಜಾರಿ ಮಾಡಲು