Widgets Magazine

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿ ಮಾಡಿದ ಚುನಾವಣಾ ಆಯೋಗ

ಚಿಂಚೋಳಿ| pavithra| Last Modified ಬುಧವಾರ, 17 ಏಪ್ರಿಲ್ 2019 (09:44 IST)
ಚಿಂಚೋಳಿ : ಕಾಂಗ್ರೆಸ್ ಶಾಸಕರಾಗಿದ್ದ ಡಾ. ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಕರ್ನಾಟಕದ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮೇ 19ರಂದು ನಡೆಯಲಿರುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.


ಕಾಂಗ್ರೆಸ್ ಶಾಸಕರಾಗಿದ್ದ ಡಾ. ಉಮೇಶ್ ಜಾಧವ್ ಅವರ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದು, ಈಗ ಕಲಬುರ್ಗಿಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಹಿನ್ನಲೆಯಲ್ಲಿ
ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮೇ 19ರಂದು ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬುದಾಗಿ ತಿಳಿದುಬಂದಿದೆ.


ಇನ್ನೂ ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 29 ಕೊನೆ ದಿನವಾಗಿದ್ದು, ಏಪ್ರಿಲ್ 30 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೂ ನಾಮಪತ್ರ ವಾಪಸ್ ಪಡೆಯಲು ಮೇ 2 ಕೊನೆ ದಿನವಾಗಿದೆ ಮೇ 19 ರಂದು ಮತದಾನ ನಡೆಯಲಿದ್ದು, ಮೇ 23 ರಂದು ಮತ ಎಣಿಕೆ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :