ತೊಂಡೆಕಾಯಿ ತಿನ್ನುವುದರಿಂದ ಆಗುವ ಲಾಭವೇನು?

ಬೆಂಗಳೂರು, ಮಂಗಳವಾರ, 19 ಜೂನ್ 2018 (15:25 IST)

ತೊಂಡೆಕಾಯಿ ಹೆಚ್ಚು ಫೈಬರ್ ಅಂಶವನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಎ, ಬಿ1, ಸಿ ಮತ್ತು ಕ್ಯಾಲ್ಸಿಯಂ ಇರುತ್ತದೆ. ಇದರಲ್ಲಿ ಕ್ಯಾಲೊರಿಗಳು ಕಡಿಮೆಯಿದ್ದು ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರಿಸಲು ಸಹಕಾರಿಯಾಗಿದೆ. ಕಿಡ್ನಿಸ್ಟೋನ್ ಸಮಸ್ಯೆ ಎದುರಿಸುತ್ತಿರುವವರಿಗೆ ತೊಂಡೆಕಾಯಿ ರಾಮಬಾಣವಾಗಿದೆ. ವಾರಕ್ಕೊಮ್ಮೆಯಾದರೂ ತೊಂಡೆಕಾಯಿ ತಿಂದರೆ ಉತ್ತಮ ನಿಮ್ಮದಾಗುತ್ತದೆ.
* ತೊಂಡೆಕಾಯಿಯನ್ನು ಹೆಚ್ಚಾಗಿ ಸೇವಿಸುವುದರಿಂದ ಕಫದ ಸಮಸ್ಯೆ ದೂರವಾಗುತ್ತದೆ.
 
* ತೊಂಡೆಕಾಯಿಯಲ್ಲಿರುವ ಬೀಜಗಳು ಮಲಬದ್ಧತೆಯನ್ನು ಸಮಸ್ಯೆಯನ್ನು ನಿವಾರಿಸುತ್ತದೆ ಮತ್ತು ಮಲ ವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಯನ್ನು ಕೂಡ ಗುಣಪಡಿಸುತ್ತದೆ.
 
* ದೇಹದ ಯಾವುದೇ ಭಾಗದಲ್ಲಿ ಹುಳು ಕಚ್ಚಿ ಗುಳ್ಳೆಗಿದ್ದರೆ ತೊಂಡೆಕಾಯಿಯ ಎಲೆಗಳನ್ನು ಜಜ್ಜಿ ಹಚ್ಚಿದರೆ ನೋವು ನಿವಾರಣೆಯಾಗುತ್ತದೆ.
 
* ವಿಟಮಿನ್ ‘ಸಿ’, ವಿಟಮಿನ್ ‘ಬಿ2’, ವಿಟಮಿನ್ ‘ಬಿ 3’ ಹೇರಳವಾಗಿರುವ ತೊಂಡೆಕಾಯಿ ನಮ್ಮ ರಕ್ತ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.
 
* ತೊಂಡೆಕಾಯಿ ಎಲೆ ರಸವನ್ನು ನೀರಲ್ಲಿ ಬೆರೆಸಿ ದಿನಕ್ಕೆ 3 ಬಾರಿ ಸೇವಿಸಿದರೆ ದೇಹದ ಉಷ್ಣತೆ ಕಡಿಮೆಯಾಗುತ್ತದೆ.
 
* 2 ಚಮಚ ತೊಂಡೆಕಾಯಿ ಎಲೆಯ ರಸವನ್ನು ಅರ್ಧ ಬಟ್ಟಲು ಮೊಸರಿನ ಜತೆ ದಿನಕ್ಕೆ 2 ಬಾರಿ ಸೇವಿಸಿದರೆ ಭೇದಿ ನಿಲ್ಲುತ್ತದೆ.
 
* ತೊಂಡೆಕಾಯಿಯ ಹಸಿ ಹಣ್ಣನ್ನು ದಿನಕ್ಕೆ ಎರಡರಂತೆ ಸೇವಿಸಿದರೆ, ಒಣಗಿರುವ ಚರ್ಮ ಮೃದುವಾಗುತ್ತದೆ ಹಾಗೂ ಮಧುಮೇಹ ಗುಣವಾಗುತ್ತದೆ. 
 
* ದೇಹದಲ್ಲಿ ಗಂದೆಗಳು ಮತ್ತು ಕಜ್ಜಿ ಆಗಿದ್ದರೆ ತೊಂಡೆಕಾಯಿ ಎಲೆಗಳನ್ನು ಜಜ್ಜಿ ಪೇಸ್ಟ್‌ ಮಾಡಿ ಆ ಜಾಗಕ್ಕೆ ಲೇಪ ಮಾಡಿದರೆ ಗಂದೆಗಳು ಶಮನವಾಗುತ್ತವೆ. 
 
* ಋತುಸ್ರಾವದ ಸಂದರ್ಭದಲ್ಲಿ ತೊಂಡೆಕಾಯಿಯನ್ನು ಸೇವಿಸುವುದರಿಂದ ಮುಟ್ಟಿನ ನೋವು ಕಡಿಮೆಯಾಗುತ್ತದೆ.
 
* ತೊಂಡೆಕಾಯಿಯಲ್ಲಿ ಕಡಿಮೆ ಕ್ಯಾಲೊರಿಗಳಿರುತ್ತದೆ ಮತ್ತು ಹೆಚ್ಚು ಹೊತ್ತು ನಿಮ್ಮ ಹೊಟ್ಟೆಯನ್ನು ತುಂಬಿದಂತಿರಿಸುತ್ತದೆ. ಇದರಿಂದ ನೀವು ಸುಲಭವಾಗಿ ತೂಕ ಕಳೆದುಕೊಳ್ಳಬಹುದು.
 
* ಒಂದು ಲೋಟ ತೊಂಡೆಕಾಯಿ ಎಲೆಯ ರಸವನ್ನು ಒಂದು ಲೋಟ ಎಳ್ಳೆಣ್ಣೆ ಜತೆ ಕುದಿಸಿ ತಯಾರಿಸಿದ ಎಣ್ಣೆಯನ್ನು ಚರ್ಮದ ಕಾಯಿಲೆಗೆ ಉಪಯೋಗಿಸಬಹುದು.
 
* ಪೊಟ್ಯಾಸಿಯಂ ಹೆಚ್ಚಿರುವ ತೊಂಡೆಕಾಯಿ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
 
* ಕಣ್ಣುಗಳು ಉರಿಯುತ್ತಿದ್ದರೆ ಒಂದು ಲೋಟ ನೀರಿಗೆ ಒಂದು ಲೋಟ ತೊಂಡೆಕಾಯಿ ಎಲೆಯ ರಸ ಸೇರಿಸಿ ಒಂದು ಲೋಟ ರಸ ಆಗುವವರೆಗೆ ಚೆನ್ನಾಗಿ ಕುದಿಸಿ. ಆ ರಸವನ್ನು ದಿನಕ್ಕೆ 3 ಬಾರಿ ಸೇವಿಸಿದರೆ ಕಣ್ಣುರಿ ನಿವಾರಣೆಯಾಗುತ್ತದೆ.
 
* ಒಂದು ಲೋಟ ತೊಂಡೆಕಾಯಿ ಎಲೆಯ ರಸವನ್ನು ಒಂದು ಲೋಟ ಎಳ್ಳೆಣ್ಣೆ ಜತೆ ಕುದಿಸಿ ಆ ಎಣ್ಣೆಯನ್ನು ಚರ್ಮದ ಮೇಲೆ ಹಚ್ಚಿದರೆ ಸೋರಿಯಾಸಿಸ್‌ನಂತಹ ಚರ್ಮದ ಸಮಸ್ಯೆ ಕಡಿಮೆಯಾಗುತ್ತದೆ.
 
* ತೊಂಡೆಕಾಯಿ ಕಫದ ಸಮಸ್ಯೆಯನ್ನು ನಿವಾರಿಸುತ್ತದೆ. ಅಲ್ಲದೆ ಇದು ರಕ್ತವನ್ನು ಶುದ್ಧೀಕರಿಸುತ್ತದೆ
 
* ಸಂಧಿಗಳಲ್ಲಿ ಊತ ಇದ್ದರೆ, ತೊಂಡೆ ಗಿಡದ ಎಲೆಗಳನ್ನು ಬೇವಿನ ಎಣ್ಣೆಯೊಂದಿಗೆ ಮಿಶ್ರಣ ಮಾಡಿ ಪೇಸ್ಟ್‌ ತಯಾರಿಸಿ, ಊತ ಇರುವ ಜಾಗದಲ್ಲಿ ಲೇಪನ ಮಾಡಿದರೆ ಊತ ಕಡಿಮೆಯಾಗುತ್ತದೆ.
 
* ಎಳೆಯ ತೊಂಡೆ ಕಾಯಿಯನ್ನು ಬಾಯಿಗೆ ಹಾಕಿ ಚೆನ್ನಾಗಿ ಜಗಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
 
* ತೊಂಡೆಕಾಯಿಯಲ್ಲಿ ವಿಟಮಿನ್ ‘ಸಿ’ ಮತ್ತು ಬೀಟಾ ಕೆರೋಟಿನ್ ಹೆಚ್ಚಾಗುವುದರಿಂದ ಕ್ಯಾನ್ಸರ್ ಅನ್ನು ತಡೆಗಟ್ಟುವ ಸಾಮರ್ಥ್ಯವನ್ನು ಇದು ಹೊಂದಿದೆ.



ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ನೇರಳೆ ಹಣ್ಣಿನ ಆರೋಗ್ಯಕರ ಉಪಯೋಗಗಳು

ನೇರಳೆ ಹಣ್ಣಿನಲ್ಲಿರು ಪ್ರೋಟೀನ್, ವಿಟಾಮಿನ್, ಆಂಟಿಆಕ್ಸಿಡೆಂಟ್, ಫ್ಲಾವಿನೋಯ್ಡ್ಸ್, ಮ್ಯಾಂಗನೀಸ್, ...

news

ಸರಳವಾದ ವಿಧಾನಗಳನ್ನು ಅನುಸರಿಸಿ ಸುಂದರವಾದ ಕಣ್ಣುಗಳನ್ನು ನಿಮ್ಮದಾಗಿಸಿಕೊಳ್ಳಿ..

ಕಣ್ಣಿನ ಸುತ್ತಲಿನ ಕಪ್ಪು ವರ್ತುಲ, ಉರಿಯೂತ, ಕಣ್ಣುರಿ, ಕಣ್ಣು ಕೆಂಪಗಾಗುವುದು, ಕಣ್ಣಿನ ಗುಳಿಬೀಳುವಿಕೆ ...

news

ಸುಂದರವಾದ, ಕಾಂತಿಯುತ ಮುಖವನ್ನು ನಿಮ್ಮದಾಗಿಸಿಕೊಳ್ಳಿ..

ಕಪ್ಪಾದ ಮತ್ತು ಮಂದವಾದ ಚರ್ಮವು ಹಲವಾರು ಕಾರಣಗಳಿಂದ ಉಂಟಾಗಿರಬಹುದಾಗಿದೆ. ಉದಾ: ಸೂರ್ಯನ ಬೆಳಕಿಗೆ ಹೆಚ್ಚು ...

news

ಕಣ್ಣಿನ ದೃಷ್ಟಿಯನ್ನು ಸುಧಾರಿಸುವುದಕ್ಕೆ ಮತ್ತು ಆರೋಗ್ಯಕ್ಕಾಗಿ ಸಲಹೆಗಳು...

ನಿಮ್ಮ ಕಣ್ಣುಗಳು ಜಗತ್ತಿಗೆ ನಿಮ್ಮ ಕಿಟಕಿಗಳಾಗಿವೆ. ಆದ್ದರಿಂದ ಅವುಗಳ ಆರೈಕೆ ಮಾಡುವುದು ಬಹುಮುಖ್ಯವಾಗಿದೆ. ...

Widgets Magazine
Widgets Magazine