Widgets Magazine

ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಬಿಐನ ಗವರ್ನರ್ ಹಾಗೂ ಉಪ ಗವರ್ನರ್

ನವದೆಹಲಿ| pavithra| Last Modified ಮಂಗಳವಾರ, 11 ಡಿಸೆಂಬರ್ 2018 (07:44 IST)
ನವದೆಹಲಿ : ಆರ್ ಬಿಐನ ಗವರ್ನರ್ ಊರ್ಜಿತ್ ಪಟೇಲ್ ಹಾಗೂ ಉಪ ಗವರ್ನರ್ ವಿರಾಲ್ ಆಚಾರ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹಾಗು ಕೇಂದ್ರ ಸರ್ಕಾರದ ನಡುವೆ ಕೆಲ ದಿನಗಳಿಂದ ತೆರೆಮರೆಯ ಬಿಕ್ಕಟ್ಟು ಉದ್ಭವಿಸಿತ್ತು. ಹೀಗಾಗಿ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ. ಉರ್ಜಿತ್ ಪಟೇಲ್ ಅವರು ನೀಡಿರುವ ರಾಜೀನಾಮೆ ಪತ್ರದಲ್ಲಿ ವೈಯುಕ್ತಿಕ ಕಾರಣಗಳಿಂದ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವೆ, ಈಗಿನಿಂದ ಜಾರಿಗೆ ಬರುವಂತೆ ನಾನು ನನಗೆ ನೀಡಲಾಗಿರುವ ಜವಾಬ್ದಾರಿಯಿಂದ ನಿವೃತ್ತನಾಗುತ್ತಿರುವೆ ಎಂದು ಹೇಳಿದ್ದಾರೆ.


ಈ ನಡುವೆ ರಿಸರ್ವ್ ಬ್ಯಾಂಕಿನ ಉಪ ಗವರ್ನರ್ ವಿರಾಲ್ ಆಚಾರ್ಯ ಅವರು ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ ಬೆನ್ನಲ್ಲೆ ವಿರಾಲ್ ಆಚಾರ್ಯ ಅವರು ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್


ಇದರಲ್ಲಿ ಇನ್ನಷ್ಟು ಓದಿ :