ಖ್ಯಾತ ರಂಗ ಕಲಾವಿದೆ ಚಿಂದೋಡಿ ಲೀಲಾ ಇನ್ನಿಲ್ಲ

Chindodi Leela
MOKSHA
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ರಂಗ ಕಲಾವಿದೆ, ಚಿತ್ರನಟಿ ಚಿಂದೋಡಿ ಲೀಲಾ (72) ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ.

ಕೆ.ಬಿ.ಆರ್ ನಾಟಕ ಕಂಪನಿ ನಡೆಸುತ್ತಿದ್ದ ಚಿಂದೋಡಿ ಲೀಲಾ ಹೃದ್ರೋಗದಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದಷ್ಟೆ ಬನ್ನೇರುಘಟ್ಟ ರಸ್ತೆಯ ವೋಕ್ಹಾರ್ಟ್ ಆಸ್ಪತ್ರೆಯಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆಯೂ ನಡೆಸಲಾಗಿತ್ತು. ಆದರೆ ಮೂರು ದಿನಗಳ ನಂತರವೂ ಅವರಿಗೆ ಸರಿಯಾಗಿ ಪ್ರಜ್ಞೆ ಬಾರದೆ ಇದ್ದುದರಿಂದ ಗುರುವಾರ ರಾತ್ರಿ ಅವರು ನಿಧನ ಹೊಂದಿದರು.

ಇಂದು ಮಧ್ಯಾಹ್ನ 12 ಗಂಟೆಗೆ ನಗರದ ಗುಬ್ಬಿ ವೀರಣ್ಣ ರಂಗ ಮಂದಿರದ ಆವರಣದಲ್ಲಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶಕ್ಕೆ ಇಡಲಾಗುತ್ತಿದ್ದು, ಬಳಿಕ ದಾವಣಗೆರೆಗೆ ಒಯ್ಯಲಾಗುತ್ತದೆ. ಶನಿವಾರ ಬೆಳಗ್ಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕಳೆದ ನಾಲ್ಕು ದಶಕಗಳಿಂದ ವೃತ್ತಿರಂಗಭೂಮಿಯಲ್ಲಿ ಸಾಕಷ್ಟು ತೊಡಗಿಸಿಕೊಂಡಿದ್ದ ಚಿಂದೋಡಿ ಲೀಲಾ ರಂಗಭೂಮಿಯಲ್ಲಿ ಖ್ಯಾತಿಯ ಉತ್ತುಂಗಕ್ಕೇರಿದ್ದರು. ಅವರ 'ಪೋಲೀಸನ ಮಗಳು' ನಾಟಕ ಬೆಂಗಳೂರಿನ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಸತತ 1, 130ಕ್ಕೂ ಹೆಚ್ಚು ಪ್ರದರ್ಶನ ಕಂಡು ದಾಖಲೆ ನಿರ್ಮಿಸಿತ್ತು. ಇವರ 'ಹಳ್ಳಿಯ ಹುಡುಗಿ' ನಾಟಕ ಕೂಡಾ ಸಾಕಷ್ಟು ಹೆಸರು ಮಾಡಿತ್ತು.

ಹಲವು ಚಲನಚಿತ್ರಗಳಲ್ಲೂ ಚಿಂದೋಡಿ ಲೀಲಾ ಅಭಿನಯಿಸಿದ್ದರು. ಶರಪಂಜರ, ತುಂಬಿದ ಕೊಡ, ಗಾನಯೋಗಿ ಪಂಚಾಕ್ಷರಿ ಗವಾಯಿಗಳಂಥ ಸಿನಿಮಾಗಳಲ್ಲಿ ನಟಿಸಿದ್ದ ಅವರಿಗೆ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿತ್ತು. ಇದಲ್ಲದೆ, ಕರ್ನಾಟಕ ಸರ್ಕಾರದ ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ನಾಟಕ ಮತ್ತು ಸಂಗೀತ ಅಕಾಡೆಮಿ ಪ್ರಶಸ್ತಿ, ತೆಲುಗು ವಿಜ್ಞಾನ ಸಮಿತಿಯ ಶ್ರೀ ಕೃಷ್ಣದೇವರಾಯ ಪ್ರಶಸ್ತಿ, ನಾಡೋಜ ಪ್ರತಿಷ್ಠಾನದ ಕಾತ್ಯಾಯಿನಿ ಪ್ರಶಸ್ತಿಗಳು ಸೇರಿದಂತೆ ಹತ್ತು ಹಲವು ಪುರಸ್ಕಾರಗಳೂ ಸಂದಿವೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

ಸಿನಿಮಾದವರ ಜೊತೆ ನಾ ಮದುವೆ ಆಗಲಾರೆ- ವರುಣ್ ಧವನ್

ಒಂದು ಕಡೆ ನಟಿ ಇಲಿಯಾನ ಜೊತೆ ಬೆಂಗಳೂರಿನಲ್ಲಿನ ಸ್ಟಾರ್ ಹೋಟೆಲ್ ನಲ್ಲಿ ಮಧ್ಯರಾತ್ರಿ ತನಕ ...

ಮಲ್ಲು ಚೆಲುವೆ ನವ್ಯ ರವಿಚಂದ್ರನ್ ಸಿನಿಮಾದಲ್ಲಿದ್ದಾರಾ ?

ಕನ್ನಡದಲ್ಲಿ ರವಿಚಂದ್ರ ಚಿತ್ರ ಎಂದರೆ ಸಾಕಷ್ಟು ಕುತೂಹಲಗಳು ಇದ್ದೆ ಇರುತ್ತದೆ. ಅವರು ಅಂತಹ ವಿಶೇಷತೆಗಳನ್ನು ...

ಪ್ರೀತಿ ಗೀತಿ ಇತ್ಯಾದಿ ಬಿಡುಗಡೆಯ ಹಾದಿಯಲ್ಲಿದೆ ...

'ಪ್ರೀತಿ ಗೀತಿ ಇತ್ಯಾದಿ' ಕನ್ನಡದ ಯಶಸ್ವಿ ನಿರ್ದೇಶಕ ಪವನ್ ವಡೆಯರ್ ನಟಿಸಿರುವ ಚಿತ್ರವಾಗಿದೆ. ಇದನ್ನು ...

ತಿಲಕ್ ಹೀರೋ ಆಗ್ತಿದ್ದಾರೆ...ಅವರು ಯಾವ ಪಾತ್ರದಲ್ಲಿ ಮಿಂಚ್ತಾರೆ ಗೊತ್ತೇ ?

ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದಾ ನಟ ತಿಲಕ್ ಹೆಚ್ಚು ಜನರಿಗೆ ಗೊತ್ತಾದರೂ ಎನ್ನುವುದು ಸುಳ್ಳಲ್ಲ. ಅವರು ...