ಮಗನ ಸಿನಿಮಾ ವಿಚಾರವಾಗಿ ಪೊಲೀಸರ ಮೊರೆ ಹೋದ ಅನಿತಾ ಕುಮಾರಸ್ವಾಮಿ!

ಬೆಂಗಳೂರು, ಶುಕ್ರವಾರ, 8 ಫೆಬ್ರವರಿ 2019 (09:30 IST)

ಬೆಂಗಳೂರು: ಪುತ್ರ ನಿಖಿಲ್ ಕುಮಾರಸ್ವಾಮಿ ನಾಯಕ ನಟನಾಗಿ ಅಭಿನಯಿಸಿದ ಸಿನಿಮಾ ವಿಚಾರವಾಗಿ ಇದೀಗ ಶಾಸಕಿ, ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


 
ಪುತ್ರ ನಿಖಿಲ್ ಅಭಿನಯದ ಸೀತಾರಾಮ ಕಲ್ಯಾಣ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ. ಈ ಸಿನಿಮಾ ಅನಿತಾ ಕುಮಾರಸ್ವಾಮಿ ಒಡೆತನದ ಚೆನ್ನಾಂಬಿಕಾ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿತ್ತು.
 
ಇದೀಗ ಸೀತಾರಾಮ ಕಲ್ಯಾಣ ಸಿನಿಮಾ ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನಿತಾ ಕುಮಾರಸ್ವಾಮಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕೆಜಿಎಫ್ ದಾಖಲೆ ದೂಳೀಪಟ ಮಾಡಿದ ನಟಸಾರ್ವಭೌಮ? ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?!

ಬೆಂಗಳೂರು: ಕೆಜಿಎಫ್ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಮೊದಲ ದಿನವೇ ಬರೆದ ಸಿನಿಮಾ. ...

news

ಮದುವೆ ಸುದ್ದಿ ಹಬ್ಬಿಸುವ ಮಾವನ ಮೇಲೆ ಮುನಿಸಿಕೊಂಡ ಪ್ರಭಾಸ್?!

ಹೈದರಾಬಾದ್: ಆಗಾಗ ತಮ್ಮ ಮದುವೆ ಬಗ್ಗೆ ಪುಕಾರು ಹಬ್ಬಿಸುವ ಮಾವ ಕೃಷ್ಣರಾಜು ವಿರುದ್ಧ ಇದೀಗ ಬಾಹುಬಲಿ ...

news

ಸಹ ನಟನಿಗೆ ಕಿಸ್ ಮಾಡುವ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ವಿಡಿಯೋ ವೈರಲ್!

ತಿರುವನಂತಪುರಂ: ಕಣ್ಸನ್ನೆ ಮಾಡಿ ರಾತ್ರೋ ರಾತ್ರಿ ಫೇಮಸ್ ಆಗಿದ್ದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ...

news

ಪುನೀತ್ ರಾಜ್ ಕುಮಾರ್ ಗೆ ಆಲ್ ದಿ ಬೆಸ್ಟ್ ಹೇಳಿದ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ರಾಕಿಂಗ್ ಸ್ಟಾರ್ ...

Widgets Magazine