ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫ್ ರಿಯಾಲಿಟಿ ಶೋ ವಿನ್ನರ್ ಮೆಬಿನಾ ಅಪಘಾತದಲ್ಲಿ ಸಾವು

ಬೆಂಗಳೂರು| Krishnaveni K| Last Modified ಬುಧವಾರ, 27 ಮೇ 2020 (09:12 IST)
ಬೆಂಗಳೂರು: ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರಿಯಾಲಿಟಿ ಶೋ ವಿಜೇತೆ ಮೆಬಿನಾ ಮೈಕಲ್ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

 
ಬೆಂಗಳೂರಿನಿಂದ ಸೋಮವಾರ ಪೇಟೆ ತಾಲೂಕಿನ ಐಗೂರಿಗೆ ಕಾರಿನಲ್ಲಿ ತೆರಳುತ್ತಿದ್ದ ಮೆಬಿನಾಗೆ ಬೆಳ್ಳೂರು ಕ್ರಾಸ್ ಬಳಿ ಅಪಘಾತವಾಗಿದೆ. ಅವರು ಚಲಿಸುತ್ತಿದ್ದ ಕಾರು ಮತ್ತು ಟ್ರ್ಯಾಕ್ಟರ್ ಮುಖಾಮುಖಿಯಾದ ಪರಿಣಾಮ ಮೆಬಿನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಜತೆಗೆ ಇನ್ನೂ ಇಬ್ಬರು ಪ್ರಯಾಣಿಕರಿದ್ದರು. ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
 
ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳ್ಳೂರು ಕ್ರಾಸ್ ಠಾಣೆಯಲ್ಲಿ ಪ್ರಕಟಣ ದಾಖಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :