ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಟೈಟಲ್ ಹಾಡು ನಿನ್ನೆಯಷ್ಟೇ ಲಾಂಚ್ ಆಗಿದೆ. ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 1 ಮಿಲಿಯನ್ ವ್ಯೂ ಪಡೆದಿತ್ತು. ಆದರೆ ಇದು ದಾಖಲೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ ಆನಂದ್ ಅಡಿಯೋ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಗರಂ ಆಗಿದ್ದಾರೆ.