ಬಾಲಿವುಡ್ ನಟ ನಾನಾ ಪಾಟೇಕರ್ ಚಿತ್ತ ಕನ್ನಡದತ್ತ

ಬೆಂಗಳೂರು, ಶುಕ್ರವಾರ, 18 ಮೇ 2018 (17:06 IST)

ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯಿಸುತ್ತಿರುವ ಕನ್ನಡದ ‘ಚಿಲ್ಲಂ’ ಚಿತ್ರದಲ್ಲಿ ಇದೀಗ ಬಾಲಿವುಡ್ ನ ಸ್ಟಾರ್ ನಟರೊಬ್ಬರು ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ.
ಈ ಮೊದಲು ಕನ್ನಡದ ಖ್ಯಾತ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಬಾಲಿವುಡ್ ನ ನಟ ನಾನಾ ಪಾಟೇಕರ್ ಅವರು ಕೂಡ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸುತ್ತಿರುವುದಾಗಿ ತಿಳಿದುಬಂದಿದೆ.  
 
ಲೂಸ್ ಮಾದ ಯೋಗಿ ಅವರ 'ಯಕ್ಷ' ಸಿನಿಮಾದಲ್ಲಿ ನಟಿಸಿದ ನಾನಾ ಪಾಟೇಕರ್ ಅವರು ಇದೀಗ ಈ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಕೆಂಪ ಚಿತ್ರದ ಬೆಡಗಿ ಪ್ರಿಯಾಂಕಾ ನಾಯಕಿಯಾಗಿ ಅಭಿನಯಿಸುತ್ತಿದ್ದು , ಬಿಗ್ ಬಾಸ್ ಸೀಸನ್ 5ರ ರನ್ನರ್ ಅಪ್ ಆಗಿದ್ದ ದಿವಾಕರ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಇನ್‌ಸ್ಟಾಗ್ರಾಂ ಖಾತೆ ತೆರೆದ ವಿಶ್ವಸುಂದರಿ ಐಶ್ ಬೇಬಿ

ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಸಾಮಾಜಿಕ ಜಾಲತಾಣಗಳಲ್ಲೊಂದಾದ ಇನ್‌ಸ್ಟಾಗ್ರಾಂ ಖಾತೆಯನ್ನು ...

news

ಉದ್ಯಾನ ನಗರಿಯಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ: ನಟಿ ಸಂಜನಾ

ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ...

news

ವಿವಾದಕ್ಕೆ ಕಾರಣವಾಗಿದೆ ಸೋನಂ-ಆನಂದ್ ಮದುವೆ

ಮುಂಬೈ : ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ಅನಿಲ್ ಕಪೂರ್ ಅವರ ಮಗಳು ನಟಿ ಸೋನಂ ...

news

ಮದುವೆ ವಿಚಾರದಲ್ಲಿ ಉಲ್ಟಾ ಹೊಡೆದ ಹುಚ್ಚ ವೆಂಕಟ್

ಬೆಂಗಳೂರು : ಇತ್ತೀಚೆಗಷ್ಟೇ ನಟಿ ಐಶ್ವರ್ಯ ಅವರನ್ನ ಮದುವೆ ಆಗಿದ್ದೇನೆ ಎಂದು ಹೇಳಿರುವ ನಟ ಹುಚ್ಚ ವೆಂಕಟ್ ...

Widgets Magazine
Widgets Magazine