ಲೋಕಸಭೆ ಚುನಾವಣೆಗೆ ಮೈಸೂರಿನಿಂದ ರಮ್ಯಾ ಸ್ಪರ್ಧೆ?

ಬೆಂಗಳೂರು, ಮಂಗಳವಾರ, 2 ಜನವರಿ 2018 (20:30 IST)

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್‍ನಿಂದ ಚಿತ್ರನಟಿ ರಮ್ಯಾ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
 
ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿದೆ. 
 
ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಯ ಪ್ರಕಾರ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಸಾಕಷ್ಟು ಸುದ್ದಿ ಮಾಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದರಿಂದ, ಕಾಂಗ್ರೆಸ್ ಹೈಕಮಾಂಡ್ ರಮ್ಯಾ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

'ನಾ ಪೇರು ಸೂರ್ಯ'ದಲ್ಲಿ ಮಿಲಿಟರಿ ಗೆಟಪ್ ನಲ್ಲಿ ಅಲ್ಲು ಅರ್ಜುನ್ (ವಿಡಿಯೋ ನೋಡಿ)

ಬೆಂಗಳೂರು: ಅಲ್ಲು ಅರ್ಜುನ್ ಅಂದರೆ ಸ್ಟೈಲಿಶ್ ಲುಕ್ ಕಣ್ಮುಂದೆ ಬರುತ್ತದೆ. ಅವರ ಪ್ರತಿ ಚಿತ್ರದಲ್ಲಿಯೂ ...

news

ಬಿಗ್ ಬಾಸ್ ಕನ್ನಡ: ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಅನುಪಮಾ ಗೌಡ! ಗೊಂಬೆ ನೇಹಾ ಕಾಪಾಡಿದ್ರಂತೆ!

ಬೆಂಗಳೂರು: ಅಕ್ಕ ಧಾರವಾಹಿ ಮೂಲಕ ಮನೆ ಮಾತಾಗಿ ಸದ್ಯಕ್ಕೆ ಬಿಗ್ ಬಾಸ್ ಸ್ಪರ್ಧಿಯಾಗಿರುವ ಅನುಪಮಾ ಗೌಡ ...

news

ಹೊಸ ವರ್ಷದ ಆಚರಣೆಗೆ ಸುದೀಪ್ ಅಭಿಮಾನಿಗಳು ಮಾಡಿದ ಕೆಲಸವೇನು ಗೊತ್ತಾ...?

ಬೆಂಗಳೂರು : ಕನ್ನಡ ಚಿತ್ರರಂಗದ ನಟ ಕಿಚ್ಚ ಸುದೀಪ್ ಅವರು ಯಾರಿಗೆ ತಿಳಿದಿಲ್ಲ ಹೇಳಿ. ಸಾವಿರಾರು ಅಭಿಮಾನಿಗಳ ...

news

ವಿರಾಟ್ -ಅನುಷ್ಕಾ ಕಂಜೂಸ್ ಬುದ್ಧಿ ನೋಡಿ ಜನ ನಗುತ್ತಿರುವುದು ಯಾಕೆ ಗೊತ್ತಾ...?

ಮುಂಬೈ : ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟು ಭಾರಿ ಸುದ್ದಿಯಾಗಿ ಜನರ ಮೆಚ್ಚುಗೆ ಪಡೆದ ವಿರಾಟ್- ...

Widgets Magazine
Widgets Magazine