ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಿಜೆಪಿ ನಾಯಕರ ಜೇಬು ಸೇರಿತು: ರಾಹುಲ್

ಸೋಮವಾರ, 7 ಏಪ್ರಿಲ್ 2014 (16:24 IST)

PR
PR
ರಾಯಚೂರು: ನರೇಂದ್ರ ಮೋದಿ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ದೇಶದ ಉದ್ಧಾರಕ್ಕೆ ಪ್ರಧಾನಿ ಮಾಡಿ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ರಾಯಚೂರಿನ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ಮಾಡಿದ್ದಾರೆ. ಜನಾರ್ದನ ರೆಡ್ಡಿ, ಆನಂದ ಸಿಂಗ್, ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದನ್ನು ರಾಹುಲ್ ಪ್ರಸ್ತಾಪಿಸಿ, ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯಿತು ಎಂದು ಹೇಳಿದರು.ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಿಜೆಪಿ ನಾಯಕರ ಜೇಬಿಗೆ ಸೇರಿದೆ ಎಂದು ಟೀಕಿಸಿದರು.

ಗಣಿಗಾರಿಕೆಯಲ್ಲಿ ಬಿಜೆಪಿ ನಾಯಕರಿಂದ ಹಣ ಲೂಟಿಯಾಗಿದೆ ಎಂದು ನುಡಿದರು. ಭಾರತ ಪ್ರಕಾಶಿಸುತ್ತಿದೆ ಎಂದವರ ಸರ್ಕಾರ ಬರಲಿಲ್ಲ ಎಂದು ರಾಹುಲ್ ಗೇಲಿ ಮಾಡಿದರು. ಬಿಜೆಪಿ ದುರಾಡಳಿತದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಬಡಜನರಿಗೆ ರೂಪಾಯಿಗೆ ಒಂದು ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ರಕ್ಷಣೆ ನೀಡುತ್ತದೆ. ಕಾಂಗ್ರೆಸ್ ದೀನದಲಿತ, ಬಡವರ ಪರ ಕೆಲಸ ಮಾಡುತ್ತೆ ಎಂದು ನುಡಿದರು. ಈ ಸಂದರ್ಭದಲ್ಲಿ ಬಿಜೆಪಿ ಸಚಿವರಾಗಿದ್ದ ಹರತಾಳು ಹಾಲಪ್ಪನವರ ವಿಷಯ ಪ್ರಸ್ತಾಪಿ ಸಚಿವನಿಂದಲೇ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಿದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

Widgets Magazine
Widgets Magazine