ಗುಲ್ವಾಡಿ, ಬೆಳಗೆರೆ ಸಹಿತ 29 ಮಂದಿಗೆ ಮಾಧ್ಯಮ ಪ್ರಶಸ್ತಿ

ಬೆಂಗಳೂರು, ಶನಿವಾರ, 2 ಫೆಬ್ರವರಿ 2008 (11:09 IST)

ಹಿರಿಯ ಪತ್ರಕರ್ತರಾದ ಸಂತೋಷ್ ಕುಮಾರ್ ಗುಲ್ವಾಡಿ, ನಾಗೇಶ್ ಹೆಗಡೆ, ಮನೋಹರ ಪ್ರಸಾದ್ ಹಾಗೂ ರವಿ ಬೆಳಗೆರೆ ಸೇರಿದಂತೆ 29 ಮಂದಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಿತಾವಧಿ ಪ್ರಶಸ್ತಿಯನ್ನು ಪ್ರಕಟಿಸಿದೆ.

ಈನಾಡು ನ್ಯೂಸ್ ಟೈಮ್ ಪತ್ರಿಕೆಯ ನವದೆಹಲಿ ಪ್ರತಿನಿಧಿ ಗಿರೀಶ್ ನಿಕ್ಕಂ ಅವರಿಗೆ ವಿಶೇಷ ಪ್ರಶಸ್ತಿ ರೂಪವಾಗಿ 15 ಸಾವಿರ ರೂ. ನಗದು ಬಹುಮಾನವನ್ನು ಘೋಷಿಸಲಾಗಿದ್ದರೆ, ಜೀವಿತಾವಧಿ ಪ್ರಶಸ್ತಿ ವಿಜೇತರಿಗೆ 10 ಸಾವಿರ ರೂ. ನಗದು ಬಹುಮಾನ ಪ್ರಕಟಿಸಲಾಗಿದೆ.

ಮಾಧ್ಯಮ ಅಕಾಡೆಮಿ ಅಧ್ಯಕ್ಷ ವಿ.ಎನ್.ಸುಬ್ಬರಾವ್ ಈ ಪ್ರಕಟಣೆ ನೀಡಿದ್ದು, ಮಾರ್ಚ್ 1 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದುವರೆಗೂ ಅನುಸರಿಸಲಾಗುತ್ತಿದ್ದ ಕ್ರಮದಂತೆ ಪ್ರತಿವರ್ಷ 14 ಮಂದಿಗೆ ಮಾತ್ರ ಜೀವಿತಾವಧಿ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೆ ಈ ವರ್ಷ ಅಕಾಡೆಮಿಗೆ ಬೆಳ್ಳಿವರ್ಷದ ಸಂಭ್ರಮ. ಆದ್ದರಿಂದ ಜಿಲ್ಲೆಗೆ ಒಬ್ಬರಂತೆ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ತಿಳಿದುಬಂದಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...