ಇದರಲ್ಲಿ ಇನ್ನಷ್ಟು ಓದಿ :
ಇವತ್ತಾದರೂ ಈಡೇರುತ್ತಾ ಅಂಗನವಾಡಿ ಕಾರ್ಯಕರ್ತೆಯರ ವೇತನದ ಬೇಡಿಕೆ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಸಿಎಂ ಜೊತೆ ಮಾತುಕತೆ ನಡೆಸಲಿದ್ದಾರೆ.

ಸದ್ಯ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ 7 ಸಾವಿರ ರೂ. ಗೌರವಧನವನ್ನ 7ಸಾವಿರಕ್ಕೆ ಹೆಚ್ಚಿಸಬೇಕು. ಸಹಾಯಕಿಯರ ಗೌರವಧನವನ್ನ 7.500ಕ್ಕೆ ಹೆಚ್ಚಿಸಬೇಕು ಎಂ ಬೇಡಿಕೆ ಸೇರಿದಂತೆ 22 ಬೇಡಿಕೆಗಳನ್ನ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿದ್ದಾರೆ.
ಕಳೆದ ತಿಂಗಳು ಫ್ರೀಡಂಪಾರ್ಕ್ ಬಳಿ 4 ದಿನ ಕಾರ್ಯಕರ್ತೆಯರೂ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಏಪ್ರಿಲ್`ನಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಇವತ್ತೂ ಸಹ ಬೇಡಿಕೆ ಈಡೇರದಿದ್ದರೆ ಸಿಎಂ ಮನೆಗೇ ಮುತ್ತಿಗೆ ಹಾಕಲು ಅಂಗನವಾಡಿ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
|
|